
ವಿಜಯಪುರ, 27 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಈರುಳ್ಳಿ ಬೆಳೆಗೆ ದರ ಕುಸಿಯದಂತೆ ಹಾಗೂ ರೈತರಿಗೆ ಅನ್ಯಾಯವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೃಷಿ ಮಾರುಕಟ್ಟೆ ಸಚಿವರು, ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ಗುರುವಾರ ಬಸವನಬಾಗೇವಾಡಿ ಕೃಷಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಕಡಿಮೆ ದರಕ್ಕೆ ಈರುಳ್ಳಿ ಖರೀದಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೂಡಲೇ ಕೃಷಿ ಮಾರುಕಟ್ಟೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ ಅವರು ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸ್ಥಳಕ್ಕೆ ತೆರಳಿ ರೈತರ ಹಿತರಕ್ಷಣೆಗೆ ಮುಂದಾಗುವಂತೆ ಸೂಚನೆ ನೀಡಿದ್ದಾರೆ.
ಸಚಿವರ ಸೂಚನೆ ಮೇರೆಗೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಅಲ್ಲಾಭಕ್ಷ ಅವರು ಸ್ಥಳಕ್ಕೆ ತೆರಳಿ, ರೈತರು ಹಾಗೂ ವರ್ತಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಈರುಳ್ಳಿ ಖರೀದಿ ಪ್ರಕ್ರಿಯೆ ಸುಗಮವಾಗಿ ಮುಂದುವರೆದಿದೆ.
ಈರುಳ್ಳಿ ಬೆಳೆಗಾರರಿಗೆ ದರ ನೀಡಿಕೆಯಲ್ಲಿ ಅನ್ಯಾಯ ಆಗದಂತೆ ಟೆಂಡರ್ ನಡೆಸಿ ಖರೀದಿ ಮಾಡುವಂತೆ ವರ್ತಕರಿಗೆ ಸೂಚಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವರ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande