ಮತದಾರರ ಪಟ್ಟಿ ಪ್ರಕಟ ; ಆಕ್ಷೇಪಣೆ ಮತ್ತು ಸೇರ್ಪಡೆಗೆ ಡಿಸೆಂಬರ್ 10 ರವರೆಗೆ ಅವಕಾಶ
ಕೊಪ್ಪಳ, 27 ನವೆಂಬರ್ (ಹಿ.ಸ.) : ಆ್ಯಂಕರ್ : ಈಶಾನ್ಯ ಕರ್ನಾಟಕ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 3 ರಂದು ಪ್ರಕಟಿಸಲಾಗುವುದು ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಕ
Objections and additions allowed till December 10


ಕೊಪ್ಪಳ, 27 ನವೆಂಬರ್ (ಹಿ.ಸ.) :

ಆ್ಯಂಕರ್ : ಈಶಾನ್ಯ ಕರ್ನಾಟಕ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 3 ರಂದು ಪ್ರಕಟಿಸಲಾಗುವುದು ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದ್ದಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಅರ್ಹತಾ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಸದಸ್ಯರ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ನವೆಂಬರ್ 25 ರಂದು ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಕಾರ್ಯಾಲಯಗಳಲ್ಲಿ ಪ್ರಚೂರಪಡಿಸಲಾಗಿದೆ. ಈ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ವೆಬ್‍ಸೈಟ್ https://koppal.nic.in/en/election ಮೂಲಕ ಪಡೆಯಬಹುದಾಗಿರುತ್ತದೆ.

ಈ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದಾದರು ಆಕ್ಷೇಪಣೆಗಳಿದ್ದಲ್ಲಿ ಹಾಗೂ ಹೊಸದಾಗಿ ಸೇರ್ಪಡೆ ಮಾಡಲು ನಮೂನೆ-19ಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳೊಂದಿಗೆ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಲು ಡಿಸೆಂಬರ್ 10 ರವರೆಗೆ ಅವಕಾಶವನ್ನು ಕಲ್ಪಿಸಲಾಗಿದ್ದು, ಡಿ. 10 ರವರಗೆ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಹಾಗೂ ನಮೂನೆ-19 ಹೊಸದಾಗಿ ಸೇರ್ಪಡೆ ಮಾಡುವ ಅರ್ಜಿಗಳನ್ನು ಡಿ. 25 ರೊಳಗೆ ವಿಲೇಗೊಳಿಸಿ, ಅಂತಿಮ ಮತದಾರರ ಪಟ್ಟಿಯನ್ನು ಡಿ. 30 ರಂದು ಪ್ರಕಟಿಸಲಾಗುವುದು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande