ನಾಳೆ ಉಡುಪಿಗೆ ಪ್ರಧಾನಿ ಭೇಟಿ ;ಗೀತೋತ್ಸವದಲ್ಲಿ ಭಾಗಿ
ಬೆಂಗಳೂರು, 27 ನವೆಂಬರ್ (ಹಿ.ಸ.) : ಆ್ಯಂಕರ್ : ನವೆಂಬರ್ 28 ರಂದು ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುವ ಗೀತೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜ
Pm visit


ಬೆಂಗಳೂರು, 27 ನವೆಂಬರ್ (ಹಿ.ಸ.) :

ಆ್ಯಂಕರ್ : ನವೆಂಬರ್ 28 ರಂದು ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುವ ಗೀತೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ

ಪವಿತ್ರ ಶ್ರೀಕೃಷ್ಣ ಕ್ಷೇತ್ರಕ್ಕೆ ಪ್ರಧಾನಮಂತ್ರಿಯವರು ಆಗಮಿಸುವುದು ಉಡುಪಿಗೆ ಮಾತ್ರವಲ್ಲ, ಸಂಪೂರ್ಣ ಕರ್ನಾಟಕಕ್ಕೂ ಹೆಮ್ಮೆಯ ಕ್ಷಣವೆಂದಿದ್ದಾರೆ.

“ಈ ಪವಿತ್ರ ಸಭೆಯಲ್ಲಿ ಅವರ ಉಪಸ್ಥಿತಿ ಭಾರತದ ನಾಗರಿಕತೆಯ ಶಾಶ್ವತ ಪರಂಪರೆ ಮತ್ತು ಆಧ್ಯಾತ್ಮಿಕ ಪ್ರಜ್ಞೆಯ ಪ್ರಬಲ ಜ್ಞಾಪಕ,” ಎಂದು ವಿಜಯೇಂದ್ರ ಹೇಳಿದ್ದಾರೆ.

ಮೋದಿಯವರ ನಾಯಕತ್ವದಲ್ಲಿ ಭಾರತ ಜಾಗತಿಕ ವೇದಿಕೆಯಲ್ಲಿ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿರುವಾಗ, ಗೀತೋತ್ಸವದಲ್ಲಿ ಅವರ ಭಾಗವಹಿಸುವಿಕೆ ಆಧ್ಯಾತ್ಮಿಕ ಮೌಲ್ಯಗಳ ಜೊತೆಗೆ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾಗಿದ್ದು, ಉಡುಪಿ ಮತ್ತು ದೇಶದಾದ್ಯಂತದ ಭಕ್ತ ಸಮುದಾಯಕ್ಕೆ ಇದು ಮಹತ್ವದ, ಗೌರವದ ಕ್ಷಣವಾಗಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande