ಅಧಿಕಾರ ಹಂಚಿಕೆ ವಿಚಾರ ಶೀಘ್ರದಲ್ಲೇ ಇತ್ಯರ್ಥ : ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು, 27 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಉದ್ಭವಿಸಿರುವ ನಾಯಕತ್ವ ಸಂಬಂಧಿತ ಗೊಂದಲ ಇಂದು ನಿರ್ಣಾಯಕ ಹಂತ ತಲುಪಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯ ಇಂದಿರಾ ಕಾಂಗ್ರೆಸ್‌ ಭವನದಲ
Kharge


ಬೆಂಗಳೂರು, 27 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಉದ್ಭವಿಸಿರುವ ನಾಯಕತ್ವ ಸಂಬಂಧಿತ ಗೊಂದಲ ಇಂದು ನಿರ್ಣಾಯಕ ಹಂತ ತಲುಪಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ದೆಹಲಿಯ ಇಂದಿರಾ ಕಾಂಗ್ರೆಸ್‌ ಭವನದಲ್ಲಿ ಹೈಕಮಾಂಡ್‌ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಿಂದ ತೆರಳಿದರು.

ದೆಹಲಿಗೆ ಹೊರಡುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ ಅವರು, “ಮೂರರಿಂದ ನಾಲ್ಕು ಪ್ರಮುಖ ನಾಯಕರನ್ನು ಕರೆಸಿ ಸಮಾಲೋಚನೆ ನಡೆಸುತ್ತೇನೆ. ಹೈಕಮಾಂಡ್‌ ಎಲ್ಲ ವಿಷಯಗಳನ್ನೂ ಸೂಕ್ತವಾಗಿ ಬಗೆಹರಿಸುತ್ತದೆ. ಮುಖ್ಯಮಂತ್ರಿ–ಉಪ ಮುಖ್ಯಮಂತ್ರಿ ವಿಚಾರಗಳನ್ನೂ ಚರ್ಚಿಸಿ ಸ್ಪಷ್ಟ ನಿರ್ಣಯ ತೆಗೆದುಕೊಳ್ಳಲಾಗುತ್ತದೆ,” ಎಂದು ಹೇಳಿದರು.

ಇಂದಿನ ಸಭೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್‌ನ ಮುಖ್ಯಸ್ಥರು ಉಪಸ್ಥಿತರಿರುತ್ತಾರೆ. ಹೈಕಮಾಂಡ್ ಎಂದರೆ ಒಬ್ಬರ ನಿರ್ಧಾರವಲ್ಲ ಸಂಪೂರ್ಣ ತಂಡ ಚರ್ಚಿಸಿ ತೀರ್ಮಾನಕ್ಕೆ ಬರುತ್ತದೆ ಎಂದು ಸ್ಪಷ್ಟಪಡಿಸಿದರು.

ನಾಯಕತ್ವ ಹಂಚಿಕೆ ವಿವಾದ ತಾರಕಕ್ಕೆ

ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಪದವಿಯ ಹಂಚಿಕೆ ಹಾಗೂ ಅಧಿಕಾರ ವರ್ಗಾವಣೆಯ ವಿಷಯ ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ಚರ್ಚೆ ಹೆಚ್ಚಿಸಿದ್ದೇ ಇಂದಿನ ನಿರ್ಣಾಯಕ ಸಭೆಗೆ ಕಾರಣವಾಗಿದೆ.

ಇದೇ ಶನಿವಾರ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಮತ್ತೊಂದು ಮಹತ್ವದ ಸಭೆ ನಡೆಯಲಿರುವುದರಿಂದ, ಹೈಕಮಾಂಡ್‌ ಇಂದು ತನ್ನ ನಿಲುವನ್ನು ಸ್ಪಷ್ಟಪಡಿಸುವ ಸಾಧ್ಯತೆ ಇದೆ ಎಂದು ಪಕ್ಷದ ಆಪ್ತ ಮೂಲಗಳು ತಿಳಿಸಿವೆ.

ಹೈಕಮಾಂಡ್‌ನಿಂದ ಸ್ಪಷ್ಟೀಕರಣ ನಿರೀಕ್ಷೆ

ಇಂದಿರಾ ಕಾಂಗ್ರೆಸ್‌ ಭವನದಲ್ಲಿ ನಡೆಯಲಿರುವ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಭಾಗವಹಿಸಲಿದ್ದಾರೆ.

ಸಭೆಯಲ್ಲೇ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ನಾಯಕತ್ವ ಸಂಘರ್ಷಕ್ಕೆ ಅಂತ್ಯ ಹಾಡುವ ನಿರೀಕ್ಷೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande