ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ : ಯತೀಂದ್ರ ಸಿದ್ದರಾಮಯ್ಯ
ಮೈಸೂರು, 27 ನವೆಂಬರ್ (ಹಿ.ಸ.) : ಆ್ಯಂಕರ್ : ಸಿದ್ದರಾಮಯ್ಯವರ ನಾಯಕತ್ವದ ಬಗ್ಗೆ ಅನುಮಾನಕ್ಕೇ ಅವಕಾಶ ಇಲ್ಲ. ಮುಂದಿನ ಎರಡೂವರೆ ವರ್ಷವೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಿದ್ದರಾಮಯ್ಯ ಪುತ್ರ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತ
Yatindra


ಮೈಸೂರು, 27 ನವೆಂಬರ್ (ಹಿ.ಸ.) :

ಆ್ಯಂಕರ್ : ಸಿದ್ದರಾಮಯ್ಯವರ ನಾಯಕತ್ವದ ಬಗ್ಗೆ ಅನುಮಾನಕ್ಕೇ ಅವಕಾಶ ಇಲ್ಲ. ಮುಂದಿನ ಎರಡೂವರೆ ವರ್ಷವೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಿದ್ದರಾಮಯ್ಯ ಪುತ್ರ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ, ರಾಜ್ಯ ರಾಜಕೀಯದಲ್ಲಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಅವರ ಮೇಲೆ ಯಾವುದೇ ಆರೋಪವಿಲ್ಲ. ಅವರನ್ನು ಕೆಳಗಿಳಿಸಬೇಕಾದ ಪರಿಸ್ಥಿತಿಯೇ ಇಲ್ಲ. ಪೂರ್ಣಾವಧಿಗೂ ಅವರು ಮುಖ್ಯಮಂತ್ರಿ ಸ್ಥಾನದಲ್ಲಿರುತ್ತಾರೆ ಎಂದು ಹೇಳಿದರು.

ಹೈಕಮಾಂಡ್ ಯಾವುದೇ ರೀತಿಯ ಬದಲಾವಣೆ ಕುರಿತು ಮಾತುಕತೆ ನಡೆಸಿಲ್ಲ. ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿಲ್ಲ ಅದರ ಬಗ್ಗೆ ನಮ್ಮ ತಂದೆಯವರಾಗಲಿ, ಹಿರಿಯ ಸಚಿವರಾಗಲಿ ಯಾರು ಮಾತಾಡಿಲ್ಲ. ಕೆಲವರ ವೈಯಕ್ತಿಕ ಅಭಿಪ್ರಾಯಕ್ಕೆ ಸಂಬಂಧವಿಲ್ಲ ಎಂದು ಯತೀಂದ್ರ ಸ್ಪಷ್ಟಪಡಿಸಿದ್ದಾರೆ.

ಯಾರಿಗೆ ಎಷ್ಟು ಶಾಸಕರ ಬೆಂಬಲ ಇದೆ ಎಂಬ ಪ್ರಶ್ನೆಗಳನ್ನು ತಳ್ಳಿ ಹಾಕಿದ ಅವರು, ಎಲ್ಲಾ ಶಾಸಕರ ಬೆಂಬಲವೂ ಸಿದ್ದರಾಮಯ್ಯವರಿಗೆ ಇದೆ. ಇದು ಪಕ್ಷದ ಆಂತರಿಕ ವಿಷಯ ಈ ಕುರಿತು ಅಂಕಿ–ಅಂಶಗಳ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

ಇದೇ ವೇಳೆ ಅದಿಚುಂಚನಗಿರಿ ಮಠದ ಸ್ವಾಮೀಜಿಯವರು ಡಿಕೆ ಶಿವಕುಮಾರ್ ಪರ ನೀಡಿದ ಹೇಳಿಕೆಗೆ ಉತ್ತರಿಸಿದ ಯತೀಂದ್ರ, ಯಾರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎನ್ನುವುದು ಪಕ್ಷದ ಶಾಸಕರು ಮತ್ತು ಹೈಕಮಾಂಡ್ ತೀರ್ಮಾನಿಸುವ ವಿಷಯ ಹೊರಗಿನವರ ಅಭಿಪ್ರಾಯ ಅನಗತ್ಯ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande