ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ
ಬಳ್ಳಾರಿ, 27 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ


ಬಳ್ಳಾರಿ, 27 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಹೆಚ್‍ಐವಿ/ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸೋಣ” ಎಂಬ ಘೋಷವಾಕ್ಯದಡಿ ಡಿ.01 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 07 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ವಾಕ್‍ಥಾನ್ ಜಾಥಾ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಚಾಲನೆ ನೀಡುವರು. ಬಳಿಕ ಬೆಳಿಗ್ಗೆ 10.30 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟಿಸುವರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಮತ್ತು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ.ಇಂದ್ರಾಣಿ ವಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ, ಬಳ್ಳಾರಿ ತಾಲ್ಲೂಕು ಆರೋಗ್ಯ ಅಧಿಕಾರಿ ಹಾಗೂ ಯೋಜನಾ ಅಭಿವೃದ್ದಿ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಾರಿ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಅಸಾಂಕ್ರಾಮಿಕ ಅಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಎಫ್‍ಪಿಎಐ ವ್ಯವಸ್ಥಾಪರಾದ ವಿಜಯಲಕ್ಷ್ಮಿ, ನಿತ್ಯಜೀವನ ಸಂಸ್ಥೆಯ ಅಧ್ಯಕ್ಷರಾದ ಹೇಮಲತ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಡ್ಯಾಪ್ಕು ಜಿಲ್ಲಾ ಮೇಲ್ವಿಚಾರಕ ಬಿ.ಗಿರೀಶ್, ಎಆರ್‍ಟಿ ಆಪ್ತ ಸಮಾಲೋಚಕ ಜಿ.ಎಮ್. ಗಣೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಇತರರು ಉಪಸ್ಥಿತರಿರುವರು ಎಂದು ತಿಳಿಸಿದೆ

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande