ರೈತ ವಿರೋಧಿ ಸರ್ಕಾರಕ್ಕೆ ಉಳಿಗಾಲವಿಲ್ಲ : ಬೊಮ್ಮಾಯಿ ಎಚ್ಚರಿಕೆ
ಹಾವೇರಿ, 28 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ‘ರೈತ ವಿರೋಧಿ ನೀತಿ’ ವಿರುದ್ಧವಾಗಿ ಹಾವೇರಿಯಲ್ಲಿ ಬಿಜೆಪಿ ಆಯೋಜಿಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರೈತರನ್ನು ಎದುರು ಹಾಕಿಕೊಂಡರೆ ಸರ್ಕ
BSB


ಹಾವೇರಿ, 28 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ‘ರೈತ ವಿರೋಧಿ ನೀತಿ’ ವಿರುದ್ಧವಾಗಿ ಹಾವೇರಿಯಲ್ಲಿ ಬಿಜೆಪಿ ಆಯೋಜಿಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರೈತರನ್ನು ಎದುರು ಹಾಕಿಕೊಂಡರೆ ಸರ್ಕಾರಕ್ಕೆ ಉಳಿಗಾಲವಿಲ್ಲ. ರೈತರು, ಬಡವರು, ಕೂಲಿಕಾರರು ನಿಮ್ಮ ಆಟವನ್ನು ನೋಡುತ್ತಿದ್ದಾರೆ. ರೈತ ವಿರೋಧಿ ಸರ್ಕಾರ ತೊಲಗುವವರೆಗೂ ಹೋರಾಡುತ್ತೇವೆ” ಎಂದು ಅವರು ಎಚ್ಚರಿಕೆ ನೀಡಿದರು.

ಕಬ್ಬು, ಮೆಕ್ಕೆಜೋಳ, ಸೋಯಾಬಿನ್ ಬೆಲೆ ಕುಸಿತವಾದರೂ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ತೋರಿಸಿದೆ. ಬೆಂಬಲ ಬೆಲೆ, ಪರಿಹಾರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರಕಾರ ವಿಫಲರಾಗಿದೆ. 67 ಲಕ್ಷ ರೈತರಲ್ಲಿ ಕೇವಲ 14 ಲಕ್ಷ ರೈತರಿಗೆ ಮಾತ್ರ ಪರಿಹಾರ ನೀಡಿದ್ದು ಉಳಿದ 43 ಲಕ್ಷ ರೈತರಿಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande