
ಹಾಸನ, 28 ನವೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯು ಖಾಲಿ ಇದ್ದು, ತುರ್ತಾಗಿ ಸೂಕ್ತವಾದ ವ್ಯಕ್ತಿಯನ್ನು ಅರ್ಹತೆಯ ಮೇರೆಗೆ ಸರ್ಕಾರದ ಮಟ್ಟದಲ್ಲಿ ಆಯ್ಕೆ ಮಾಡಬೇಕಾಗಿರುತ್ತದೆ. ಸದರಿ ಗೌರವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯೂ ಪದವಿ ಪೂರ್ಣಗೊಳಿಸಿರುಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ 50 ವರ್ಷ ಮೇಲ್ಪಟ್ಟಿರಬಾರದು. ಜಿಲ್ಲಾ ಕೇಂದ್ರದಿಂದ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸವಿರಬೇಕು. ಮಾನಸಿಕ ಮತ್ತು ದೈಹಿಕ ವೈದ್ಯಕೀಯ ಪ್ರಮಾಣ ಪತ್ರ, ಜನ್ಮ ದಿನಾಂಕ, ವಿದ್ಯಾರ್ಹತೆ, ವಿಳಾಸ, ದೂರವಾಣಿ ಸಂಖ್ಯೆ ಸೇರಿದ ಸ್ವ-ವಿವರ, ಮತ್ತಿತರ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗೆ ದಿನಾಂಕ 20-12-2025 ರ ಒಳಗಾಗಿ ಸಲ್ಲಿಸಬೇಕಾಗಿರುತ್ತದೆ ಎಂದು ಆರಕ್ಷಕ ಮಹಾ ನಿರ್ದೇಶಕರು ಹಾಗೂ ಪೌರರಕ್ಷಣೆಯ ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa