
ಬಳ್ಳಾರಿ, 28 ನವೆಂಬರ್ (ಹಿ.ಸ.) :
ಆ್ಯಂಕರ್ : ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.37 ರ ಎಸ್‍ಪಿ ವೃತ್ತಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ಎಂದು ನಾಮಕರಣ ಮಾಡಲು ಹಾಗೂ ವೃತ್ತದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 30 ದಿನಗಳೊಳಗಾಗಿ ಲಿಖಿತವಾಗಿ ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಬಹುದು.
ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದೇ ಇದ್ದಲ್ಲಿ ಸರ್ಕಾರದ ಸುತ್ತೋಲೆಯ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್