ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ: ಸಿದ್ದರಾಮಯ್ಯ
ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ; ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Cm


ಬೆಂಗಳೂರು, 28 ನವೆಂಬರ್ (ಹಿ.ಸ.):

ಆ್ಯಂಕರ್:

ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,

ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುದಾಗಿ ಹೇಳಿದ್ದಾರೆ ಎಂದರು.

ದೆಹಲಿಗೆ ತೆರಳುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಆಹ್ವಾನ ಬಂದರೆ ದೆಹಲಿಗೆ ತೆರಳುವೆ ಎಂದು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande