
ವಿಜಯಪುರ, 28 ನವೆಂಬರ್ (ಹಿ.ಸ.)
ಆ್ಯಂಕರ್: ಕೊಲೆಗೈದಿರುವ ಆರೋಪಿಗೆ ಒಂದನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದ್ದಾರೆ. ಬಾಳು ದೇವೇಂದ್ರ ಸೈನಸಾಕಾಳೆ ಜೀವಾವಧಿ ಶಿಕ್ಷೆಗೆ ಒಳಗಾದವನು. ಇನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಾಳಸಂಗಿ ಗ್ರಾಮದಲ್ಲಿ 11-08-2023ರಂದು ಮಲ್ಲೇಶಿ ಎಂಬಾತನ ಜೊತೆಗೆ ದ್ರಾಕ್ಷಿ ತೋಟಕ್ಕೆ ಹೋದಾಗ 20 ಸಾವಿರ ಹಣಕ್ಕಾಗಿ ಮಲ್ಲೇಶಿ ಮೇಲೆ ಬಾಳು ಏಕಾಏಕಿ ಚಾಕುವಿನಿಂದ ಹಲ್ಲೆಗೈದು ಕೊಲೆ ಮಾಡಿದ್ದಾನೆ. ಈ ವೇಳೆ ಭಯಭೀತರಾಗಿ ಸ್ಥಳದಲ್ಲಿಯೇ ಚಪ್ಪಲಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಇಂಡಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ಇಂಡಿ ಗ್ರಾಮೀಣ ಪೊಲೀಸರು ಸೂಕ್ತ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಾದ ವಿವಾದ ಆಲಿಸಿದ ಒಂದನೆ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಎ.ಮೋಹನ ಆರೋಪಿ ಬಾಳುಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಮಾಡಿದ್ದಾರೆ. ಸರ್ಕಾರದ ಪರವಾಗಿ ವನಿತಾ ಎಸ್. ಇಟಗಿ ವಾದ ಮಂಡಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande