
ಗದಗ, 28 ನವೆಂಬರ್ (ಹಿ.ಸ.) :
ಆ್ಯಂಕರ್ : ಗದಗ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಜರುಗಿತು. ಈ ವೇಳೆ ಡಿ.ಎ.ಆರ್. ಗದಗ ಶಹರ ಮತ್ತು ವಿ. ಘಟಕ, ಬೆಟಗೇರಿ ವೃತ್ತ, ಗದಗ ಗ್ರಾಮಿಣ, ಮುಳಗುಂದ, ರೋಣ, ನರಗುಂದ, ಮುಂಡರಗಿ, ಶಿರಹಟ್ಟಿ ತಂಡಗಳು ಭಾಗವಹಿಸಿದ್ದವು.
ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಎಸ್ಸಿ ರೋಹನ್ ಜಗದೀಶ್ ಚಾಲನೆ ನೀಡಿದರು. 2024ರ ವಯಕ್ತಿಕ ಚಾಂಪಿಯನ್ ಅನಿಲ ಬನ್ನಿಕೊಪ್ಪ ಅವರು ಕ್ರೀಡಾಜ್ಯೋತಿ ಬೆಳಗಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಮನಸ್ಸಿನ ನೆಮ್ಮದಿಗಾಗಿ ಕ್ರೀಡಾಕೂಟ ಮುಖ್ಯವಾಗಿದೆ. ಒಬ್ಬರೊನ್ನೊಬ್ಬರು ಅರ್ಥ ಮಾಡಿಕೊಳ್ಳಲು ಕ್ರೀಡೆಗಳು ಸಹಾಯವಾಗುತ್ತವೆ. ಗೆಲುವು-ಸೋಲು ಇದ್ದೇ ಇರುತ್ತದೆ. ಇದರ ಹೊರತಾಗಿ ಕ್ರೀಡೆಗಳಲ್ಲಿ ಖುಷಿಯಿಂದ ಭಾಗವಹಿಸಬೇಕು. ಪ್ರತಿಜ್ಞಾ ವಿಧಿ ಸ್ವೀಕರಿಸಿದಂತೆ ಎಲ್ಲರೂ ಮುಕ್ತ ಮನಸ್ಸಿನಿಂದ ಆಟದಲ್ಲಿ ಭಾಗವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಮಾತನಾಡಿ, ಪೊಲೀಸ್ ಸಿಬ್ಬಂದಿಗಳ ಒತ್ತಡದ ಕೆಲಸದ ನಡುವೆ ಉತ್ತಮ ಆರೋಗ್ಯಕ್ಕಾಗಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ನಮ್ಮ
ನಮ್ಮ ಜಿಲ್ಲೆಯನ್ನು ಗೆಲ್ಲಿಸುವ ಉದ್ದೇಶ ಹೊಂದಲಾಗಿದ್ದು, ಎಲ್ಲ ಸಿಬ್ಬಂದಿಗಳು ಉತ್ತಮ ಪ್ರದರ್ಶನ ನೀಡಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪ್ರಭುಗೌಡ, ಮುರ್ತುಜಾ ಖಾದ್ರಿ, ಮಾಂತೇಶ ಸಜ್ಜನ ಸೇರಿದಂತೆ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP