
ಉಡುಪಿ, 28 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಪ್ರವಾಸ ದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಬರಮಾಡಿಕೊಂಡರು.
ಈ ವೇಳೆ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ನಂತರ ಉಡುಪಿ ನಗರಕ್ಕಾಗಮಿಸಿದ ಪ್ರಧಾನಿ ಮೋದಿ ಭವ್ಯ ರೋಡ್ ಶೋ ಆರಂಭಿಸಿದ್ದು, ಬೆಳಗ್ಗೆಯಿಂದಲೇ ಅವರ ಆಗಮನದ ನಿರೀಕ್ಷೆಯಲ್ಲಿದ್ದ ಸಾವಿರಾರು ಜನರು ಪುಷ್ಪವೃಷ್ಟಿ ಮಾಡಿ ಹರ್ಷೋದ್ಗಾರ ವ್ಯಕ್ತಪಡಿಸಿದರು. ಜನರ ಅಭಿವಂದನೆಗೆ ಪ್ರತಿಯಾಗಿ ಮೋದಿ ಎಲ್ಲರತ್ತ ಕೈ ಬೀಸಿ ನಗೆ ಬೀರಿದರು.
ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಗೀತೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa