
ಬೆಂಗಳೂರು, 28 ನವೆಂಬರ್ (ಹಿ.ಸ.) :
ಆ್ಯಂಕರ್ : ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೆಳಗಾವಿ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಿದೆ.
ರೈಲು ಸಂಖ್ಯೆ 06503 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು 24.12.2025 (ಬುಧವಾರ) ರಂದು ಸಂಜೆ 7 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 8:25ಕ್ಕೆ ಬೆಳಗಾವಿ ತಲುಪಲಿದೆ. ಮತ್ತೊಂದೆಡೆ, ಮರಳಿ ಸಂಚರಿಸುವ ರೈಲು ಸಂಖ್ಯೆ 06504 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು 28.12.2025 (ಭಾನುವಾರ) ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಎಸ್ಎಂವಿಟಿ ಬೆಂಗಳೂರಿಗೆ ತಲುಪಲಿದೆ.
ಮಾರ್ಗ ಮಧ್ಯದಲ್ಲಿ, ಈ ವಿಶೇಷ ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೊಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ.
ಈ ವಿಶೇಷ ರೈಲು 23 ಬೋಗಿಗಳನ್ನು ಒಳಗೊಂಡಿರಲಿದೆ, ಇದರಲ್ಲಿ ಎರಡು ಎಸಿ 2-ಟೈರ್, ಮೂರು ಎಸಿ 3-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ಐದು ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎರಡು ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa