

ಬಳ್ಳಾರಿ, 28 ನವೆಂಬರ್ (ಹಿ.ಸ.) :
ಆ್ಯಂಕರ್ : ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ವರದಾನವಾಗಿವೆ. ಯುವಕರು ತಮ್ಮಲ್ಲಿರುವ ಸಾಂಸ್ಕøತಿಕ ಮತ್ತು ಶೈಕ್ಷಣಿಕ ಪ್ರತಿಭೆಗಳನ್ನು ವಿನಿಮಯ ಮಾಡಿಕೊಳ್ಳಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದ್ದಾರೆ.
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ‘ಅಂತರ ವಿಭಾಗೀಯ ಯುವಜನೋತ್ಸವ 2025’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಹಲವಾರು ಮಜಲುಗಳನ್ನು ದಾಟಿ ಗುರಿ ಮುಟ್ಟಬೇಕಾಗುತ್ತದೆ. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಂತಹ ಶಕ್ತಿ ಯುವಕರಲ್ಲಿದೆ. ಯುವಕರು ಸಮಯವನ್ನು ಒಳ್ಳೆಯ ವಿಚಾರಗಳಿಗಾಗಿ ಮೀಸಲಿಡಬೇಕು. ಪಠ್ಯಪುಸ್ತಕದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳನ್ನು ಭೌತಿಕವಾಗಿಯೂ ಮತ್ತು ಮಾನಸಿಕವಾಗಿಯೂ ಸದೃಢರನ್ನಾಗಿ ಮಾಡುತ್ತದೆ ಎಂದು ಹೇಳಿದರು.
ವಿವಿಯ ಕುಲಪತಿಗಳಾದ ಪ್ರೊ. ಎಂ ಮುನಿರಾಜು ವರ್ಚುವಲ್ ಮುಖಾಂತರ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳನ್ನು ಹೊರತುಪಡಿಸಿ ಮಾನವಿಯ ಮೌಲ್ಯಗಳು, ವೈಚಾರಿಕ ಚಿಂತನೆಗಳನ್ನು ಬೆಳೆಸುವುದು. ವಿಶ್ವವಿದ್ಯಾಯದಲ್ಲಿ ಒಳ್ಳೆಯ ವಾತಾವರಣ ನಿರ್ಮಾಣ ಮಾಡುವಲ್ಲಿ ಯುವಕರಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ. ಯುವಜನೋತ್ಸವ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದರು.
ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾದ ಪ್ರೊ. ಜಿ ಪಿ ದಿನೇಶ್, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಎನ್ ಎಮ್ ಸಾಲಿ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದ ಸಾಂಸ್ಕøತಿಕ ಸಂಯೋಜಕರಾದ ಪ್ರೊ. ಶಿರಗಾನಹಳ್ಳಿ ಶಾಂತನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಡಾ. ಕೆ. ಎಸ್ ಶಿವಪ್ರಕಾಶ ನಿರೂಪಿಸಿದರು. ಡಾ. ಅಣ್ಣಾಜಿ ಕೃಷ್ಣಾರೆಡ್ಡಿ ವಂದಿಸಿದರು.
ಈ ವೇಳೆ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಭೋದಕರು, ಸಂಶೋಧನಾ ವಿದ್ಯಾರ್ಥಿಗಳು, ಭೋದಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್