
ಮುರ್ಷಿದಾಬಾದ್, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸರಿಯಾದ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 12 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಗೆ ಆಶ್ರಯ ಒದಗಿಸಿದ್ದ ಭಾರತೀಯ ಸಬೇರ್ ಅಲಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ರಾತ್ರಿ ಖಚಿತ ಮಾಹಿತಿ ಆಧರಿಸಿ ಇಸ್ಲಾಂಪುರ ಪ್ರದೇಶದ ಗೋಪಾಲಪುರ ಗ್ರಾಮದಲ್ಲಿ ದಾಳಿ ನಡೆಸಿ ಬಂಧನಗಳು ನಡೆದಿದೆ. ಯಾವುದೇ ಮಾನ್ಯ ದಾಖಲೆಗಳನ್ನು ಹೊಂದಿರದ ಸ್ಥಿತಿಯಲ್ಲಿ ಈ ಬಾಂಗ್ಲಾದೇಶಿಗಳು ಗ್ರಾಮದಲ್ಲಿ ವಾಸಿಸುತ್ತಿದ್ದರೆಂದು ಪೊಲೀಸ್ ತನಿಖೆ ತಿಳಿಸಿದೆ.
ಅವರು ಭಾರತಕ್ಕೆ ಹೇಗೆ ಪ್ರವೇಶಿಸಿದರು, ಎಷ್ಟು ಕಾಲದಿಂದ ಅಕ್ರಮವಾಗಿ ವಾಸಿಸುತ್ತಿದ್ದರು ಎಂಬುದನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa