ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಧಾರವಾಡ, 29 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಧಾರವಾಡ, 29 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾಸಿಂಧು sevasindhu.karnataka.gov.in ಮುಖಾಂತರ ಡಿಸೆಂಬರ್ 30, 2025 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande