
ಬಳ್ಳಾರಿ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ವತಿಯಿಂದ ಡಿ.01 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಅಧಿಕಾರಿ ಆಗಿರುವ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 07 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಮುಂಭಾಗದಲ್ಲಿ ವಾಕಥಾನ್ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಾಕಥಾನ್ ಅಲ್ಲಿಂದ ಆರಂಭಗೊಂಡು ಸಂಗಂ ವೃತ್ತ- ರಾಘವೇಂದ್ರ ಸಿನಿಮಾ ಮಂದಿರ ರಸ್ತೆ- ಕೆ.ಸಿ.ರಸ್ತೆ- ಮೀನಾಕ್ಷಿ ವೃತ್ತದ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಗಡಿಗಿ ಚೆನ್ನಪ್ಪ ವೃತ್ತ- ಸಂಗಂ ವೃತ್ತದ ಮಾರ್ಗವಾಗಿ ಮರಳಿ ಜಿಲ್ಲಾ ಆಸ್ಪತ್ರೆಯ ಆವರಣಕ್ಕೆ ತಲುಪಿ ಅಂತ್ಯಗೊಳ್ಳಲಿದೆ. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಅಂದು ಸಂಜೆ 06 ಗಂಟೆಗೆ ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಕ್ಯಾಂಡೆಲ್ (ಮೇಣದ ಬತ್ತಿ) ಲೈಟ್ ಜಾಥ ಹಮ್ಮಿಕೊಳ್ಳಲಾಗಿದೆ. ಜಾಥಾವು ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗದಿಂದ ಆರಂಭಗೊಂಡು ಹೆಚ್.ಆರ್.ಗವಿಯಪ್ಪ ವೃತ್ತದವರೆಗೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್