ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಹಾಸನ, 29 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ನೃತ್ಯ ಸುಗಮ ಸಂಗೀತ ಕಥಾಕೀರ್ತನ ಮತ್ತು ಗಮಕ - ಈ ಐದು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 202
ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ


ಹಾಸನ, 29 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ನೃತ್ಯ ಸುಗಮ ಸಂಗೀತ ಕಥಾಕೀರ್ತನ ಮತ್ತು ಗಮಕ - ಈ ಐದು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

2025-26ನೇ ಸಾಲಿನ ಶಿಷ್ಯವೇತನಕ್ಕೆ, ಆಯ್ಕೆ, ಪ್ರಕ್ರಿಯೆಯನ್ನು ಮೊಬೈಲ್ /ವಿಡಿಯೋ ಚಿತ್ರೀಕರಣದ ಮೂಲಕ ಈ ಕೆಳಕಂಡತೆ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದೆ. ಶಿಷ್ಯವೇತನ ಅರ್ಜಿಗಳ ಬಗೆ, ಮಾಹಿತಿಯನ್ನು ಅಕಾಡೆಮಿ ಫೇಸ್‌ಬುಕ್ ನಲ್ಲಿ (facebook.com/karnatakasangeetanrutyaacdemy)(Sangeetanrityaacademy.karnataka.gov.in) ವೆಬ್‌ಸೈಟ್‌ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಅರ್ಜಿಯನ್ನು ಸ್ವೀಕರಿಸಲು ಕೊನೆಯ

ಡಿ.20 ಆಗಿದೆ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟಾರ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande