
ಕೊಪ್ಪಳ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2025-26ನೇ ಸಾಲಿನ ಸಾಂಸ್ಕೃತಿಕ ವಾತಾವರಣ ಉಂಟುಮಾಡುವಲ್ಲಿ ನಿರಂತರ ಚಟುವಟಿಕೆಗಳ ಮೂಲಕ ಕ್ರಿಯಾಶೀಲವಾಗಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷ ಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಪ್ರೋತ್ಸಾಹ ನೀಡಲು ಧನಸಹಾಯ ನೀಡಲಾಗುತ್ತಿದ್ದು, ಅರ್ಹ ನೋಂದಾಯಿತ ಸಂಘ- ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಧನಸಹಾಯ ಪಡೆಯಲು ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಅಳವಡಿಸಿಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 1 ರಿಂದ 30 ರ ವರೆಗೆ ಅವಕಾಶವಿದ್ದು, ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಸರ್ಕಾರದ ಮತ್ತು ಇಲಾಖೆಯ ಮಾರ್ಗಸೂಚಿ ಅನುಸಾರ ಸೇವಾಸಿಂಧುವಿನಲ್ಲಿ ಸಹಾಯಧನ ಹಾಗೂ ಧನಸಹಾಯಕ್ಕೆ ಅರ್ಜಿ ಸಲ್ಲಿಸಿದ ಕ್ರಿಯಾಶೀಲ ಸಂಘ-ಸ0ಸ್ಥೆಗಳು ತಮ್ಮ ಸಂಸ್ಥೆಯ ದೃಢೀಕರಣ ಪತ್ರ ಮತ್ತು ಅರ್ಜಿ ಸಲ್ಲಿಸಿದ ಎಲ್ಲಾ ಅಗತ್ಯ ದಾಖಲೆಗಳ ಎರಡು ಪ್ರತಿಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಲ್ಲಿಸಬೇಕು. ಸೇವಾಸಿಂಧುವಿನ ಮೂಲಕ ಸಲ್ಲಿಕೆಯಾಗದ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.kannadasiri.karnataka.gov.in ಅಥವಾ ಸೇವಾಸಿಂಧು ಪೋರ್ಟಲ್‌ನ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ಇಲಾಖೆಯ ದೂರವಾಣಿ ಸಂಖ್ಯೆ: 080-24410547, 8792662814, 9986837037, 9916600027ಗೆ ಸಂಪರ್ಕಿಸಬಹುದು ಅಥವಾ ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್