ಭಾರತ–ದಕ್ಷಿಣ ಆಫ್ರಿಕಾ ಏಕದಿನ ಕ್ರಿಕೆಟ್ ಪಂದ್ಯಕ್ಕೆ ವ್ಯಾಪಕ ಭದ್ರತೆ
ರಾಂಚಿ, 29 ನವೆಂಬರ್ (ಹಿ.ಸ.) : ಆ್ಯಂಕರ್ : ನವೆಂಬರ್ 30ರಂದು ನಾಳೆ ರಾಂಚಿ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ–ದಕ್ಷಿಣ ಆಫ್ರಿಕಾ ಏಕದಿನ ಕ್ರಿಕೆಟ್ ಪಂದ್ಯಕ್ಕಾಗಿ ರಾಂಚಿ ಪೊಲೀಸರಿಂದ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಭದ್ರತೆಗಾಗಿ ಎಟಿಎಸ್, ಐಆರ್‌ಬಿ, ಆರ್‌ಎಪ
Security


ರಾಂಚಿ, 29 ನವೆಂಬರ್ (ಹಿ.ಸ.) :

ಆ್ಯಂಕರ್ : ನವೆಂಬರ್ 30ರಂದು ನಾಳೆ ರಾಂಚಿ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ–ದಕ್ಷಿಣ ಆಫ್ರಿಕಾ ಏಕದಿನ ಕ್ರಿಕೆಟ್ ಪಂದ್ಯಕ್ಕಾಗಿ ರಾಂಚಿ ಪೊಲೀಸರಿಂದ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.

ಭದ್ರತೆಗಾಗಿ ಎಟಿಎಸ್, ಐಆರ್‌ಬಿ, ಆರ್‌ಎಪಿ, ಜಿಲ್ಲಾ ಹಾಗೂ ಮಹಿಳಾ ಪೊಲೀಸ್ ಸೇರಿ 5,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕ್ರೀಡಾಂಗಣ ಮತ್ತು ಸುತ್ತಮುತ್ತ ನಿಯೋಜಿಸಲಾಗಿದೆ. ಜೊತೆಗೆ 6 ಐಪಿಎಸ್, 15 ಡಿಎಸ್‌ಪಿ ಹಾಗೂ 30 ಕ್ಕೂ ಹೆಚ್ಚು ಠಾಣಾಧಿಕಾರಿಗಳು ಭದ್ರತೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ಎಸ್‌ಎಸ್‌ಪಿ ರಾಕೇಶ್ ರಂಜನ್ ಮಾಹಿತಿ ನೀಡಿದ್ದಾರೆ.

ಕ್ರೀಡಾಂಗಣದ ಒಳ–ಹೊರಗೆ ಅಗ್ನಿಶಾಮಕ ದಳ ಹಾಗೂ ಜಲಫಿರಂಗಿ ತಂಡವನ್ನು ಇರಿಸಲಾಗಿದ್ದು, ಸರಳ ಉಡುಪಿನಲ್ಲಿರುವ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಆಟಗಾರರು ತಂಗಿರುವ ರಾಡಿಸನ್ ಬ್ಲೂ ಹೋಟೆಲ್‌ಗೂ ಪ್ರತ್ಯೇಕ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ಹಿರಿಯ ಅಧಿಕಾರಿಗಳು ಹೋಟೆಲ್ ಮತ್ತು ಕ್ರೀಡಾಂಗಣದ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಎಲ್ಲಾ ಠಾಣಾಧಿಕಾರಿಗಳಿಗೆ ಗಸ್ತು ಬಲಪಡಿಸಲು ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande