
ನಾಗಮಂಗಲ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ನಾಗಮಂಗಲದ ಹೊರವಲಯದ ಮನೆಯೊಂದರಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಿಂದ ನಡೆದ ಹಾನಿಯನ್ನು ಸಚಿವ ಚಲುವರಾಯಸ್ವಾಮಿ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಯಲ್ಲಿ ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಕುಟುಂಬವು ಆರ್ಥಿಕ ನಷ್ಟವನ್ನು ಅನುಭವಿಸಿದ್ದು , ತಮ್ಮ ವೈಯಕ್ತಿಕ ನಿಧಿಯಿಂದ ತಕ್ಷಣದ ಪರಿಹಾರಧನವನ್ನು ಹಸ್ತಾಂತರಿಸಿದರು.
ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ, ಸರ್ಕಾರದಿಂದ ತುರ್ತು ಮತ್ತು ಸೂಕ್ತ ಪರಿಹಾರ ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa