
ಶಿವಮೊಗ್ಗ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ “ಅಕ್ಷಯಪಾತ್ರೆ” ಯಂತಾಗಿವೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ಮಧು ಹೇಳಿದರು.
ನಗರದ ತಾಲ್ಲೂಕು ಪಂಚಾಯತ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನಪರ ಯೋಜನೆಗಳು ಸಮರ್ಪಕವಾಗಿ ಜಾರಿಗೆ ಬಂದು, ಬಡವರು, ಮಧ್ಯಮ ವರ್ಗದವರು ಮತ್ತು ಮಹಿಳೆಯರಿಗೆ ದೊಡ್ಡ ನೆರವಾಗುತ್ತಿವೆ ಎಂದು ತಿಳಿಸಿದರು. ತಾಲ್ಲೂಕು ಮಟ್ಟದಲ್ಲೂ ಸಕಾಲದಲ್ಲಿ ಲಾಭ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa