
ಹಾಸನ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವತಿಯಿಂದ ಕೆ.ಐ.ಎ.ಡಿ.ಬಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, ನ.30 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆ ಯವರೆಗೆ ಕೆ.ಐ.ಎ.ಡಿ.ಬಿ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಜಯಂತಿಕಾಫಿ ವರ್ಕ್ಸ್, ಎಸ್.ಎಸ್. ಗ್ರಾನೈಟ್ಸ್, ಹೆಚ್.ಪಿ.ಸಿ.ಎಲ್, ಕ್ಲೆನೆ ಪ್ಯಾಕ್ಸ್, ಮತ್ತಿತರ ಕೈಗಾರಿಕಾ ಪ್ರದೇಶಗಳು, ಕೌಶಿಕ ಮಾರ್ಗದ ಪ್ರದೇಶಗಳು, ದೊಡ್ಡಬಸವನಹಳ್ಳಿ, ಕಾಚನಾಯಕನಹಳ್ಳಿ, ಸಮುದ್ರವಳ್ಳಿ, ನಾಗತಿಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa