ಬೆಳಗಾವಿ ಜಿಲ್ಲೆಯ ತ್ರೈಮಾಸಿಕ ಕೆ.ಡಿ.ಪಿ.ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ, 29 ನವೆಂಬರ್ (ಹಿ.ಸ.) : ಆ್ಯಂಕರ್ : ಶಾಸಕರ, ಸಂಸದರ ಕ್ಷೇತ್ರಾಭಿವೃದ್ಧಿ ಅನುದಾನದಡಿ ಕೈಗೊಳ್ಳಲಾಗುತ್ತಿರುವ‌ ಕಾಮಗಾರಿಗಳನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸುವುದರ ಜೊತೆಗೆ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ‌ ಸೂಚಿಸಿದರು. ಬ
Kdp meeting


ಬೆಳಗಾವಿ, 29 ನವೆಂಬರ್ (ಹಿ.ಸ.) :

ಆ್ಯಂಕರ್ : ಶಾಸಕರ, ಸಂಸದರ ಕ್ಷೇತ್ರಾಭಿವೃದ್ಧಿ ಅನುದಾನದಡಿ ಕೈಗೊಳ್ಳಲಾಗುತ್ತಿರುವ‌ ಕಾಮಗಾರಿಗಳನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸುವುದರ ಜೊತೆಗೆ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ‌ ಸೂಚಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ‌ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ನಡೆದ ಕಳೆದ ಬಾರಿಯ ಸಭೆಯಲ್ಲಿ ನಿರ್ಣಯಿಸಿದಂತೆ ಜಿಲ್ಲಾಧಿಕಾರಿ‌ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕೆಲ‌ ಮುಖ್ಯ ಇಲಾಖೆಗಳನ್ನು ಹಂಚಿಕೆ ಮಾಡಿ ಆ ಇಲಾಖೆಗಳ‌ ಕುರಿತು ವಿಸ್ತ್ರತವಾಗಿ ಪ್ರಗತಿ‌ ಪರೀಶಿಲಿಸಲಾಗುತ್ತಿದೆ. ಇದರಿಂದಾಗಿ ಇಲಾಖೆಗಳಲ್ಲಿ ಬಾಕಿ ಇರುವ‌ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅನುಕೂಲವಾಗಲಿದೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಹಂತದಲ್ಲಿ‌ಜರುಗಿಸುವ ಸಭೆಯ ಹಾಗೂ ಸಭೆಯ ಅನುಪಾಲನಾ ವರದಿಯನ್ನು ಜನಪ್ರತಿನಿಧಿಗಳಿಗೆ ಒದಗಿಸಲು ಅವರುಗಳನ್ನು ಸಭೆಗೆ ಸಾಕಷ್ಟು ಮುಂಚಿತವಾಗಿ ಸಭೆಯ ಮಾಹಿತಿ ನೀಡಲು ಸೂಚಿಸಿದರು.

ಬೆಳಗಾವಿ ನಗರ ವ್ಯಾಪ್ತಿಯು ತುಂಬಾ ವಿಶಾಲವಾಗಿದ್ದು ನಗರದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಎರಡು ಹೊಸ ಗಹನ ತ್ಯಾಜ್ಯ ವಿಲೆವಾರಿ ಘಟಕಗಳನ್ನು ಸ್ಥಾಪಿಸಲು ಕ್ರಮ ವಹಿಸಲು ತಿಳಿಸಿದರು. ಹೊಸ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಪ್ರಾರಂಭಿಸಲು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande