
ಧಾರವಾಡ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಡಿಸೆಂಬರ್ 01, 2025 ರಂದು ಬೆಳಿಗ್ಗೆ 8:30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ನಿಮಿತ್ತ ಹೆಚ್.ಐ.ವಿ, ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಡಿಸೆಂಬರ್ 01, 2025 ರಂದು ಬೆಳಿಗ್ಗೆ 8:30 ಘಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನ್ಯಾಯಾಧೀಶರು ಉದ್ಘಾಟಿಸುವರು.
ಕಾರ್ಯಕ್ರಮಕ್ಕೆ ಗಣ್ಯರು, ಅಧಿಕಾರಿಗಳು, ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa