
ವಿಜಯಪುರ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ಬಿಲಾಲ್ ಕಾಲೋನಿಯಲ್ಲಿ ನಡೆದಿದೆ.
ಮಹಮ್ಮದ್ ಬಾಣಕರ (6) ಬೀದಿ ನಾಯಿಗಳ ದಾಳಿಗೆ ಒಳಗಾದ ಬಾಲಕ. ಟ್ಯೂಷನ್ ಕ್ಲಾಸ್‌ನಿಂದ ಮನೆಗೆ ತೆರಳುವ ವೇಳೆ ಬೀದಿ ನಾಯಿಗಳು ದಾಳಿ ಮಾಡಿ ಕಚ್ಚಿವೆ. ಬಾಲಕನ ತೊಡೆ ಭಾಗಕ್ಕೆ ಗಾಯವಾಗಿದೆ. ಬಾಲಕನ ಸಹೋದರ ಹಾಗೂ ಸ್ಥಳಿಯರಿಂದ ರಕ್ಷಣೆ ಮಾಡಿದ್ದಾರೆ.
ಇನ್ನು ನಿಡಗುಂದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಲಕನ ಪ್ರಥಮ ಚಿಕಿತ್ಸೆ ನೀಡಲಾಗಿದೆ
ಸ್ಥಳಕ್ಕೆ ತಹಶೀಲ್ದಾರ ಎ ಡಿ ಅಮರಾವಡಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕೆಂದು ಜನರು ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande