ಹಲಗೇರಿಯಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ
ಕೊಪ್ಪಳ, 29 ನವೆಂಬರ್ (ಹಿ.ಸ.) : ಆ್ಯಂಕರ್ : ಹಲಗೇರಿ ಗ್ರಾಮದ ಕನಕನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಜಗದೀಶ ಓಜನಹಳ್ಳಿ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ಜರುಗಿತು. ಹಲಗೇರಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂಗಮೇಶ ತೇರಿನ
Special Gram Sabha on Children's Rights in Halageri


ಕೊಪ್ಪಳ, 29 ನವೆಂಬರ್ (ಹಿ.ಸ.) :

ಆ್ಯಂಕರ್ : ಹಲಗೇರಿ ಗ್ರಾಮದ ಕನಕನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಜಗದೀಶ ಓಜನಹಳ್ಳಿ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ಜರುಗಿತು.

ಹಲಗೇರಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂಗಮೇಶ ತೇರಿನ ಮಾತನಾಡಿ, ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆಗಳನ್ನು ಆಯೋಜನೆ ಮಾಡಲಾಗಿದ್ದು, ಮಕ್ಕಳ ಗ್ರಾಮಸಭೆಯಲ್ಲಿ ಮಕ್ಕಳ ಹಕ್ಕುಗಳ ತಿಳುವಳಿಕೆ ಹಾಗೂ ಮಕ್ಕಳ ಕುಂದುಕೊರತೆಗಳು ಮತ್ತು ಅವುಗಳ ಪರಿಹಾರದ ಬಗ್ಗೆ ಚರ್ಚಿಸಿ ನಿಯಮಾನುಸಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಮಕ್ಕಳ ಸಹಾಯವಾಣಿ ಆಪ್ತ ಸಮಾಲೋಚಕಿ ಲತಾ ಮಾತನಾಡಿ, ಮಕ್ಕಳ ಹಕ್ಕುಗಳ ಬಗ್ಗೆ ಮಕ್ಕಳಿಗೆ ವಿವರಿಸಿದರು ಹಾಗೂ ಮಕ್ಕಳ ಸಹಾಯವಾಣಿ ಸಂಖ್ಯೆಯಾದ 1098 ಇದರ ಉಪಯೋಗದ ಕುರಿತು ಮಕ್ಕಳಿಗೆ ತಿಳುವಳಿಕೆ ನೀಡಿದರು.

ಗ್ರಾ.ಪಂ ಕಾರ್ಯದರ್ಶಿ ದೊಡ್ಡನಗೌಡ ಪೊಲೀಸ್ ಪಾಟೀಲ ಸ್ವಾಗತಿಸಿದರು. ಸಭೆಯಲ್ಲಿ ಮಕ್ಕಳಿಂದ ಬೇಡಿಕೆಗಳು ಸಲ್ಲಿಕೆಯಾದವು.

ಗ್ರಾಮಸಭೆಯಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಮಲ್ಲಿಕಾರ್ಜುನ ಮಡಿವಾಳರ, ಕಳಕನಗೌಡ ಹಳೆಮನಿ, ಆರ್.ಜಿ. ತಿಮ್ಮನಗೌಡ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ದ್ಯಾಮಣ್ಣ ದಮ್ಮೂರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶರಣಯ್ಯ ಹಿರೇಮಠ, ಬಸನಗೌಡ ಪಾಟೀಲ, ಉಮೇಶ ಸಸಿ, ಗ್ರಾಮ ಪಂಚಾಯತ ಕಾರ್ಯದರ್ಶಿ ದೊಡ್ಡನಗೌಡ ಪೊಲೀಸ್ ಪಾಟೀಲ್, ಶಾಲೆಗಳ ಮುಖ್ಯೋಪಾಧ್ಯಾಯರು, ಪೊಲೀಸ್ ಇಲಾಖೆ ಸಿಬ್ಬಂದಿ, ಎಲ್ಲಾ ಶಾಲೆಗಳ ಮಕ್ಕಳು ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande