ವಿದ್ಯಾರ್ಥಿಗಳು ಜ್ಞಾನ ವೃದ್ಧಿಸಿಕೊಳ್ಳಿ : ಪ್ರೊ.ಜಿ.ಪಿ ದಿನೇಶ್
ಬಳ್ಳಾರಿ, 29 ನವೆಂಬರ್ (ಹಿ.ಸ.) : ಆ್ಯಂಕರ್ : ಶೈಕ್ಷಣಿಕ ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಉಪನ್ಯಾಸಗಳಲ್ಲಿ ಭಾಗವಹಿಸುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾದ ಪ್ರೊ.ಜಿ.ಪಿ ದಿನೇಶ್ ಅವರು ಹೇಳಿದ್ದಾರೆ. ವಿ
ವಿದ್ಯಾರ್ಥಿಗಳು ಜ್ಞಾನ ವೃದ್ಧಿಸಿಕೊಳ್ಳಿ: ಪ್ರೊ.ಜಿ.ಪಿ ದಿನೇಶ್


ಬಳ್ಳಾರಿ, 29 ನವೆಂಬರ್ (ಹಿ.ಸ.) :

ಆ್ಯಂಕರ್ : ಶೈಕ್ಷಣಿಕ ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಉಪನ್ಯಾಸಗಳಲ್ಲಿ ಭಾಗವಹಿಸುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾದ ಪ್ರೊ.ಜಿ.ಪಿ ದಿನೇಶ್ ಅವರು ಹೇಳಿದ್ದಾರೆ.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದಲ್ಲಿ ‘ರಾಸಾಯನಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳ ಕುರಿತು ಎರಡು ದಿನಗಳ ಹಳೆಯ ವಿದ್ಯಾರ್ಥಿಗಳ ಉಪನ್ಯಾಸ ಸರಣಿಗಳು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಉಪನ್ಯಾಸ ಸರಣಿಗಳಿಂದ ಸಮಗ್ರ ವಾತಾವರಣವನ್ನು ಒದಗಿಸಿಕೊಳ್ಳಬಹುದು. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಪ್ರಸ್ತುತ ವಿದ್ಯಾರ್ಥಿ ಹಾಗೂ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಿದಂತಾಗುತ್ತದೆ. ಸಮಾಜಕ್ಕೆ ಶೈಕ್ಷಣಿಕ ಸೇವೆಯನ್ನು ಒದಗಿಸುವ ಮೂಲಕ ಜವಾಬ್ದಾರಿಯುತ ಸ್ಥಾನ ಪಡೆಯಬಹುದು ಎಂದು ಮಾತನಾಡಿದರು.

ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಎಮ್ ಸಾಲಿ ಮಾತನಾಡಿ, ಹಳೆಯ ವಿದ್ಯಾರ್ಥಿಗಳ ಸಂಘವು ವಿದ್ಯಾರ್ಥಿ ಮತ್ತು ಶಿಕ್ಷಣ ಸಂಸ್ಥೆಯ ನಡುವೆ ಬಲವಾದ ಬಾಂಧವ್ಯ ಸ್ಥಾಪಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಗೆ ವಿಚಾರ ವಿನಿಮಯಕ್ಕಾಗಿ ಸೂಕ್ವವಾದ ವೇಧಿಕೆ ಒದಗಿಸಿದಂತಾಗುತ್ತದೆ. ಶೈಕ್ಷಣಿಕ ಪ್ರಗತಿಯ ಜೊತೆಗೆ ದೇಶವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶುದ್ಧ ವಿಜ್ಞಾನ ವಿಭಾಗದ ಡೀನ್ ಪ್ರೊ.ಖಡ್ಕೆ ಉದಯ ಕುಮಾರ್, ಕಾರ್ಯಕ್ರಮ ಸಂಚಾಲಕರಾದ ಪ್ರೊ.ಕೆ.ಎಸ್ ಲೋಕೇಶ್, ಸಹ ಸಂಚಾಲಕ ಡಾ.ಸಾದು ಸೂರ್ಯಕಾಂತ ಎಸ್., ಪ್ರೊ.ಅರುಣ್‍ಕುಮಾರ ಲಗಶೆಟ್ಟಿ ಉಪಸ್ಥಿತರಿದ್ದರು.

ಎರಡು ದಿನಗಳ ಹಳೆಯ ವಿದ್ಯಾರ್ಥಿಗಳ ಉಪನ್ಯಾಸ ಸರಣಿಯಲ್ಲಿ ವಿಭಾಗದ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande