
ಕೊಪ್ಪಳ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ವತಿಯಿಂದ ಡಿಸೆಂಬರ್ 1 ರಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹೆಚ್.ಐ.ವಿ. ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸೋಣ ಎನ್ನುವ ಘೋಷ ವಾಕ್ಯದೊಂದಿಗೆ ವಿಶ್ವ ಏಡ್ಸ್ ದಿನವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಕಾರ್ಯಕ್ರವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್