
ಬಳ್ಳಾರಿ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀಡಾಡಿ ದನಗಳ ಮಾಲೀಕರು ತಮ್ಮ ದನ-ಕರುಗಳನ್ನು ಮನೆಯಲ್ಲಿಯೇ ಕಟ್ಟಿಕೊಳ್ಳಬೇಕು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಬೀಡಾಡಿ ದನಗಳು ಸಾರ್ವಜನಿಕ ರಸ್ತೆಗಳು ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಲಾಗಿ ತಿರುಗಾಡುವುದು ಹಾಗೂ ಮಲಗಿರುವುದು ಕಂಡು ಬಂದಿದ್ದು, ಇವುಗಳಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ತೊಂದರೆಯಾಗಿ ಅಪಘಾತಗಳಿಗೆ ಕಾರಣವಾಗುತ್ತಿವೆ ಹಾಗೂ ಬೀಡಾಡಿ ದನಗಳಿಗೂ ಸಹ ತೊಂದರೆ ಉಂಟಾಗುತ್ತಿದೆ. ಪಾಲಿಕೆಯು ಗಂಭೀರವಾಗಿ ಪರಿಗಣಿಸಿದೆ.
ಹಾಗಾಗಿ ಎಲ್ಲಾ ಬೀಡಾಡಿ ದನಗಳ ಮಾಲೀಕರು ತಮ್ಮ ತಮ್ಮ ದನಕರುಗಳನ್ನು ತಮ್ಮ ಸುಪರ್ದಿಯಲ್ಲಿಯೇ ಕಟ್ಟಿಕೊಳ್ಳಬೇಕು. ತಪ್ಪಿದಲ್ಲಿ ಪಾಲಿಕೆಯಿಂದ ಕಾರ್ಯಾಚರಣೆ ನಡೆಸಿ ಎಲ್ಲಾ ಬೀಡಾಡಿ ದನಗಳನ್ನು ಹಿಡಿದು ನಿಯಮಾನುಸಾರ ನಗರದಿಂದಾಚೆಗೆ ಸ್ಥಳಾಂತರಿಸಲಾಗುವುದು. ಯಾವುದೇ ಕಾರಣಕ್ಕೂ ಸಹ ಮರಳಿ ನೀಡಲಾಗುವುದಿಲ್ಲ ಹಾಗೂ ಅಂತಹ ಮಾಲೀಕರನ್ನು ಗುರುತಿಸಿ ಸಾರ್ವಜನಿಕ ಉಪದ್ರವದಡಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್