ಸಹಾಯಧನಕ್ಕೆ ಸಿನಿಮಾ ಮಾಡಬೇಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, 03 ನವೆಂಬರ್ (ಹಿ.ಸ.) : ಆ್ಯಂಕರ್ : ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ
Film


ಮೈಸೂರು, 03 ನವೆಂಬರ್ (ಹಿ.ಸ.) :

ಆ್ಯಂಕರ್ : ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು.

ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು.

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದರು.

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande