
ಬಳ್ಳಾರಿ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ನವೆಂಬರ್ 15 ರಂದು ಮಧ್ಯಾಹ್ನ 12.30 ಕ್ಕೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಸಲು ನಿಗದಿಪಡಿಸಲಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್