
ವಿಜಯಪುರ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಜಯ ಕರ್ನಾಟಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಕ್ಕರೆ ಕಾರ್ಖಾನೆಗಳ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಕ್ಕರೆ ಕಾರ್ಖಾನೆಗಳು ಟನ್ ಕಬ್ಬಿಗೆ 3,500 ರೂಪಾಯಿ ನೀಡಬೇಕು. ಇನ್ನು ಭೀಕರ ಭೀಮಾನದಿಯ ಪ್ರವಾಹ, ಅಕಾಲಿಕ ಮಳೆಯಿಂದಾಗಿ ರೈತರು ಹೈರಾಣು ಆಗಿದ್ದಾರೆ. ಕೈಗೆ ಬಂದಂತಹ ತುತ್ತು ಬಾಯಿಗೆ ಬರದಂತೆ ಆಗಿದೆ. ನ್ಯಾಯಯುತವಾದ ದರ ಸಿಗದೆ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನೆರವಿಗೆ ಧಾವಿಸಬೇಕಿದ್ದ ಜಿಲ್ಲಾಡಳಿತ, ರಾಜ್ಯ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಬೇಡಿಕೆಯಂತೆ ಕಬ್ಬಿಗೆ ದರ ನಿಗದಿಪಡಿಸಬೇಕು. ಬಳಿಕ ಕಬ್ಬು ನುರಿಸುವ ಹಂಗಾಮು ಆರಂಭಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande