
ಮೈಸೂರು, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಮೈಸೂರಿನಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಸಭೆ ಈಗಾಗಲೇ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. ಅಲ್ಲದೇ, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa