ಗಂಗಾವತಿ : ನ.12 ರಂದು ರಾಷ್ಟ್ರೀಯ ಶಿಶಿಕ್ಷು ಮೇಳ
ಗಂಗಾವತಿ, 03 ನವೆಂಬರ್ (ಹಿ.ಸ.) : ಆ್ಯಂಕರ್ : ಗಂಗಾವತಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ನವೆಂಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ವಿವಿಧ ಎನ್‍ಎಂಸಿ ಉದ್ದಿಮೆದಾರರ ವತಿಯಿಂದ ಐಟಿಐನ ಎಲ್ಲಾ ವೃತ್ತಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಅಪ್ರೆಂಟಿಷಿಪ್ ತರಬೇತಿಗಾಗ
ಗಂಗಾವತಿ : ನ.12 ರಂದು ರಾಷ್ಟ್ರೀಯ ಶಿಶಿಕ್ಷು ಮೇಳ


ಗಂಗಾವತಿ, 03 ನವೆಂಬರ್ (ಹಿ.ಸ.) :

ಆ್ಯಂಕರ್ : ಗಂಗಾವತಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ನವೆಂಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ವಿವಿಧ ಎನ್‍ಎಂಸಿ ಉದ್ದಿಮೆದಾರರ ವತಿಯಿಂದ ಐಟಿಐನ ಎಲ್ಲಾ ವೃತ್ತಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಅಪ್ರೆಂಟಿಷಿಪ್ ತರಬೇತಿಗಾಗಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಶಿಶಿಕ್ಷು ಮೇಳವನ್ನು ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಸ್ವವಿವರದೊಂದಿಗೆ (ಬಯೊಡಾಟಾ) ಶೈಕ್ಷಣಿಕ ಮೂಲ ದಾಖಲಾತಿಗಳು ಹಾಗೂ ಅದರ ಜೆರಾಕ್ಸ್ ಪ್ರತಿಗಳು ಮತ್ತು ಭಾವಚಿತ್ರಗಳೊಂದಿಗೆ ಮೇಳಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಂಗಾವತಿ, ದೂ.ಸಂ.9844044900, 8904448925 ಇ-ಮೇಲ್- itigvt@gamil.comಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande