
ಹುಬ್ಬಳ್ಳಿ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ನವೆಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿಯನ್ನು ಹುಬ್ಬಳ್ಳಿಯ ತಾಲ್ಲೂಕು ತಹಶೀಲ್ದಾರ್ ಕಾರ್ಯಾಲಯದಲ್ಲಿ ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ನವೆಂಬರ್ 5 ರಂದು ಸಂಜೆ 4 ಗಂಟೆಗೆ ಕಾರ್ಯಾಲಯದ ಸಭಾಭವನದಲ್ಲಿ ಜಯಂತಿಯ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಪೂರ್ವಭಾವಿ ಸಭೆಗೆ ಸಮಾಜದ ಮುಖಂಡರು, ಸಂಘಗಳ ಅಧ್ಯಕ್ಷರು, ಸಂಘದ ಪದಾಧಿಕಾರಿಗಳು ಹಾಜರಾಗಬೇಕೆಂದು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa