
ನವದೆಹಲಿ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ “ಉದಯೋನ್ಮುಖ ವಿಜ್ಞಾನ ಮತ್ತು ತಂತ್ರಜ್ಞಾನ ನಾವೀನ್ಯತೆ ಶೃಂಗಸಭೆ 2025” ಅನ್ನು ಉದ್ಘಾಟಿಸಿ, ಭಾರತವು ತಂತ್ರಜ್ಞಾನದ ಗ್ರಾಹಕ ರಾಷ್ಟ್ರದಿಂದ ನಾವೀನ್ಯತೆಯ ಮುಂಚೂಣಿ ರಾಷ್ಟ್ರವಾಗಿ ಬೆಳೆಯುತ್ತಿದೆ ಎಂದು ಹೇಳಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಪ್ರಧಾನಿ ₹1 ಲಕ್ಷ ಕೋಟಿಯ ಆರ್‌ಡಿಐ ಯೋಜನಾ ನಿಧಿಯನ್ನು ಪ್ರಾರಂಭಿಸಿದರು. ಈ ಯೋಜನೆಯು ಖಾಸಗಿ ವಲಯ–ಚಾಲಿತ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ.
ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವಕೇಂದ್ರಿತ ನೈತಿಕ ದೃಷ್ಟಿಕೋನವನ್ನು ಭಾರತ ರೂಪಿಸುತ್ತಿದೆ. ಸಂಶೋಧನೆ ಮುಂದುವರಿದಾಗ ಮತ್ತು ನಾವೀನ್ಯತೆ ಎಲ್ಲರಿಗೂ ಸಿಗುವಾಗ ಮಾತ್ರ ನಿಜವಾದ ಪ್ರಗತಿ ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಪ್ರಧಾನಿ ಅಟಲ್ ಟಿಂಕರಿಂಗ್ ಲ್ಯಾಬ್‌ಗಳ ಸಂಖ್ಯೆಯನ್ನು 25,000 ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದರು. ತಂತ್ರಜ್ಞಾನದಲ್ಲಿ ಮಹಿಳೆಯರ ಹೆಚ್ಚುತ್ತಿರುವ ಕೊಡುಗೆಯನ್ನು ಅವರು ಶ್ಲಾಘಿಸಿದರು ಹಾಗೂ ಯುವ ಸಂಶೋಧಕರಿಗೆ ಪ್ರೇರಣೆ ನೀಡುವಂತೆ ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa