ತೆಲಂಗಾಣ ರಸ್ತೆ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ ; ಪರಿಹಾರ ಘೋಷಣೆ
ನವದೆಹಲಿ, 03 ನವೆಂಬರ್ (ಹಿ.ಸ.) : ಆ್ಯಂಕರ್ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್–ಟಿಪ್ಪರ್ ಅಪಘಾತದಲ್ಲಿ ಹಲವು ಜೀವಹಾನಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಜೀವ ಹಾನಿಯಾಗಿರುವುದು ತೀವ್ರ ದುಃಖಕರ. ಈ ಕಷ್ಟದ ವೇಳ
Pm


ನವದೆಹಲಿ, 03 ನವೆಂಬರ್ (ಹಿ.ಸ.) :

ಆ್ಯಂಕರ್ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್–ಟಿಪ್ಪರ್ ಅಪಘಾತದಲ್ಲಿ ಹಲವು ಜೀವಹಾನಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಪಘಾತದಲ್ಲಿ ಜೀವ ಹಾನಿಯಾಗಿರುವುದು ತೀವ್ರ ದುಃಖಕರ. ಈ ಕಷ್ಟದ ವೇಳೆಯಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಯಿಂದ ಪ್ರತಿ ಕುಟುಂಬಕ್ಕೆ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ಘೋಷಿಸಿದ್ದಾರೆ.

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಈ ಅಪಘಾತದಲ್ಲಿ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande