
ನವದೆಹಲಿ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ “ಉದಯೋನ್ಮುಖ ವಿಜ್ಞಾನ ಮತ್ತು ತಂತ್ರಜ್ಞಾನ ನಾವೀನ್ಯತೆ ಸಮಾವೇಶ 2025” ಅನ್ನು ಉದ್ಘಾಟಿಸಲಿದ್ದಾರೆ.
ಈ ಸಂದರ್ಭದಲ್ಲಿ ದೇಶದ ಖಾಸಗಿ ವಲಯದ ಸಂಶೋಧನೆ ಮತ್ತು ನಾವೀನ್ಯತೆ ಉತ್ತೇಜನಕ್ಕಾಗಿ ₹1 ಲಕ್ಷ ಕೋಟಿ ರೂಪಾಯಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ಯೋಜನೆಗೆ ಚಾಲನೆ ನೀಡಲಾಗುತ್ತದೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.
ಇಂದಿನಿಂದ ನ. 5ರವರೆಗೆ ನಡೆಯುವ ಈ ಸಮಾವೇಶದಲ್ಲಿ ಭಾರತ ಹಾಗೂ ವಿದೇಶಗಳಿಂದ 3,000 ಕ್ಕೂ ಹೆಚ್ಚು ವಿಜ್ಞಾನಿಗಳು, ಸಂಶೋಧಕರು ಮತ್ತು ಉದ್ಯಮ ತಜ್ಞರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಕೃತಕ ಬುದ್ಧಿಮತ್ತೆ, ಕ್ವಾಂಟಮ್ ತಂತ್ರಜ್ಞಾನ, ಕೃಷಿ ಮತ್ತು ಆರೋಗ್ಯ ತಂತ್ರಜ್ಞಾನ ಸೇರಿದಂತೆ 11 ಪ್ರಮುಖ ಕ್ಷೇತ್ರಗಳ ಚರ್ಚೆ ಮತ್ತು ಪ್ರದರ್ಶನಗಳು ನಡೆಯಲಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa