
ರಂಗಾರೆಡ್ಡಿ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ತೆಲಂಗಾಣದ ಚೆವೆಲ್ಲಾ ಮಂಡಲದ ಖಾನ್ಪುರ್ ಗೇಟ್ ಬಳಿ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ದುರಂತ ಸಂಭವಿಸಿದ್ದು, ಆರ್‌ಟಿಸಿ ಬಸ್ ಮತ್ತು ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ.ಅಪಘಾತದಲ್ಲಿ ಟಿಪ್ಪರ್ ಲಾರಿಯ ಚಾಲಕ ಹಾಗೂ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 70 ಮಂದಿ ಪ್ರಯಾಣಿಕರಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸಾವಿನ ಅಂತಿಮ ಸಂಖ್ಯೆ ಇನ್ನೂ ಅಧಿಕೃತವಾಗಿ ದೃಢಪಡಿಸಬೇಕಿದೆ.
ಡಿಕ್ಕಿಯ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣ ಧ್ವಂಸಗೊಂಡಿದ್ದು, ಐದು ಸಾಲುಗಳ ಸೀಟುಗಳು ಟಿಪ್ಪರ್ ಲಾರಿಯ ಕೆಳಗೆ ಸಿಲುಕಿಕೊಂಡಿವೆ. ಹಲವರು ತಮ್ಮ ಸೀಟುಗಳಲ್ಲಿ ಸಿಕ್ಕಿಹಾಕಿಕೊಂಡಿರುವುದರಿಂದ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ದುರಂತ ಹೈದರಾಬಾದ್‌ನಿಂದ ಸುಮಾರು 40 ಕಿ.ಮೀ ದೂರದಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಮತ್ತು ತುರ್ತುಸೇವಾ ಸಿಬ್ಬಂದಿ ಆಗಮಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa