
ಹೈದರಾಬಾದ್, 03 ನವೆಂಬರ್ (ಹಿ.ಸ.) :
ಆ್ಯಂಕರ್ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕನಿಷ್ಠ 18 ಮಂದಿ ಮೃತಪಟ್ಟಿದ್ದಾರೆ, 20 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಿರ್ಜಾಗುಡದ ಬಳಿ ಹೈದರಾಬಾದ್–ಬಿಜಾಪುರ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಪ್ರಯಾಣಿಕ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಬಲಭಾಗ ಸಂಪೂರ್ಣ ಛಿದ್ರಗೊಂಡಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಟಿಪ್ಪರ್ ಲಾರಿ ಬಸ್ ಮೇಲೆ ಉರುಳಿಬಿದ್ದಿದೆ. ಬಸ್‌ನಲ್ಲಿ ಸುಮಾರು 70 ಪ್ರಯಾಣಿಕರಿದ್ದು, ಹೆಚ್ಚಿನವರು ಹೈದರಾಬಾದ್‌ಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಎಂದು ತಿಳಿದು ಬಂದಿದೆ.
ಗಾಯಗೊಂಡವರಲ್ಲಿ ಅನೇಕರ ಸ್ಥಿತಿ ಚಿಂತಾಜನಕವಾಗಿದೆ. ಟಿಪ್ಪರ್ ಹಾಗೂ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿದೆ.
ಅಪಘಾತದಿಂದ ಚೆವೆಲ್ಲಾ–ವಿಕರಾಬಾದ್ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಸ್ಥಳೀಯ ಶಾಸಕರು ಹಾಗೂ ಸಚಿವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa