ಕುಲ್ಗಾಮ್‌ನಲ್ಲಿ ಎರಡು ಭಯೋತ್ಪಾದಕ ಅಡಗುತಾಣಗಳು ಪತ್ತೆ
ಕುಲ್ಗಾಮ್, 03 ನವೆಂಬರ್ (ಹಿ.ಸ.) : ಆ್ಯಂಕರ್ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಮ್ಹಾಲ್ ಹಂಜಿಪೋರಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆಯ ವೇಳೆ ಎರಡು ಹಳೆಯ ಭಯೋತ್ಪಾದಕ ಅಡಗುತಾಣಗಳನ್ನು ಪತ್ತೆ ಹಚ್ಚಿವೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ 9ನೇ ರಾಷ್ಟ್ರ
ಕುಲ್ಗಾಮ್‌ನಲ್ಲಿ ಎರಡು ಭಯೋತ್ಪಾದಕ ಅಡಗುತಾಣಗಳು ಪತ್ತೆ


ಕುಲ್ಗಾಮ್, 03 ನವೆಂಬರ್ (ಹಿ.ಸ.) :

ಆ್ಯಂಕರ್ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಮ್ಹಾಲ್ ಹಂಜಿಪೋರಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆಯ ವೇಳೆ ಎರಡು ಹಳೆಯ ಭಯೋತ್ಪಾದಕ ಅಡಗುತಾಣಗಳನ್ನು ಪತ್ತೆ ಹಚ್ಚಿವೆ.

ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ 9ನೇ ರಾಷ್ಟ್ರೀಯ ರೈಫಲ್ಸ್ ಹಾಗೂ ಸ್ಥಳೀಯ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿದರು. ಅಹಮದಾಬಾದ್ ಮತ್ತು ನೆಂಗ್ರಿಪೋರಾ ಅರಣ್ಯ ಪ್ರದೇಶಗಳ ಮಧ್ಯೆ ಅಡಗಿಸಲಾಗಿದ್ದ ಎರಡು ಅಡಗುತಾಣಗಳನ್ನು ಭದ್ರತಾ ಪಡೆಗಳು ಪತ್ತೆಹಚ್ಚಿ ಧ್ವಂಸಗೊಳಿಸಿದವು.

ಅಡಗುತಾಣಗಳಿಂದ ಗ್ಯಾಸ್ ಸಿಲಿಂಡರ್‌ಗಳು, ಬಟ್ಟೆಗಳು ಹಾಗೂ ಇತರ ಸಾಮಗ್ರಿಗಳು ವಶಪಡಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande