ಜಾನುವಾರು ಕಾಲುಬಾಯಿ ಜ್ವರದ ವಿರುದ್ಧ ಲಸಿಕಾ ಅಭಿಯಾನ
ವಿಜಯಪುರ, 03 ನವೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ನ.3ರಿಂದ ಡಿಸೆಂಬರ್-02 ರವರೆಗೆ ನಡೆಯಲಿದ್ದು, ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಜಾನುವಾರು ರೋಗ ನಿಯಂತ್ರಣಕ
ಜಾನುವಾರು ಕಾಲುಬಾಯಿ ಜ್ವರದ ವಿರುದ್ಧ ಲಸಿಕಾ ಅಭಿಯಾನ


ವಿಜಯಪುರ, 03 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ನ.3ರಿಂದ ಡಿಸೆಂಬರ್-02 ರವರೆಗೆ ನಡೆಯಲಿದ್ದು, ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಜಾನುವಾರು ರೋಗ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 2,68,616 ಕ್ಕೂ ಅಧಿಕ ಜಾನುವಾರುಗಳಿದ್ದು, ರೈತರ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕಲಾಗುತ್ತದೆ. ಜಾನುವಾರು ಮಾಲೀಕರು ತಪ್ಪದೇ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಹಾಗೂ ಮೂರು ತಿಂಗಳ ಮೇಲ್ಪಟ್ಟ ದನ ಮತ್ತು ಎಮ್ಮೆಗಳಿಗೆ ಲಸಿಕೆ ಹಾಕಿಸಬೇಕು. ಲಸಿಕೆ ಸಂದರ್ಭದಲ್ಲಿ ಪ್ರತಿಯೊಂದು ಜಾನುವಾರುಗಳಿಗೆ ಪ್ರತ್ಯೇಕವಾಗಿ ಸಿರಂಜ್‍ಗಳನ್ನು ಉಪಯೋಗಿಸಲಾಗುವುದು. ಗರ್ಭಧರಿಸಿದ ಹಾಲು ಕೊಡುವ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ಲಸಿಕೆ ಹಾಕುವಾಗು ಮಾಲೀಕರು ತಮ್ಮ ಹೆಸರು ವರ್ಗ, ಆಧಾರ ಸಂಖ್ಯೆ ಮತ್ತು ದೂರವಾಣಿ ಸಂಖ್ಯೆಯನ್ನು ನೀಡಿ ಸಹಕರಿಸುವಂತೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande