
ವಿಜಯಪುರ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಯನ್ನು ವಿಜಯಪುರ ಜಿಲ್ಲೆಗೆ ನಿರ್ಬಂಧಿಸಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಉಮೇಶ ವಂದಾಲ್ ಹೇಳಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ನಿರ್ಬಂಧನ ಖಂಡಿಸಿ ನಾಳೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅಲ್ಲದೇ, ಕನೇರಿ ಸ್ವಾಮಿಗಳು ದೇಶಕ್ಕೆ ಮಾದರಿಯಾಗಿದ್ದಾರೆ. ಬಡ ಮಕ್ಕಳಿಗೆ ಗುರುಕುಲ ವಿದ್ಯಾಭ್ಯಾಸ, ಕೃಷಿಯಲ್ಲಿ ಸಾಧನೆ ಸೇರಿದಂತೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅಂತಹವರಿಗೆ ನಿರ್ಬಂಧ ಹೇರಿದ್ದು ಸರಿಯಲ್ಲ. ಅದಕ್ಕಾಗಿ ನಿರ್ಬಂಧ ತೆರವು ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ. ಅದಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಭಕ್ತರು, ಅಭಿಮಾನಿಗಳು ಆಗಮಿಸಬೇಕು ಎಂದು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande