ಬೀದಿ ನಾಯಿಗಳನ್ನು ನಿಯಂತ್ರಿಸಲು ನೋಡಲ್ ಅಧಿಕಾರಿ ನೇಮಕಗೊಳಿಸಿ
ಗದಗ, 30 ನವೆಂಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು , ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ಮುಖ್ಯಸ್ಥರಿಗೆ ಈ ಮೂಲಕ ತಿಳಿಸುವುದೇನೆಂದರೆ ಸರ್ವೋಚ್ಚ ನ್ಯಾಯಾಲಯವು
ಫೋಟೋ


ಗದಗ, 30 ನವೆಂಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು , ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ಮುಖ್ಯಸ್ಥರಿಗೆ ಈ ಮೂಲಕ ತಿಳಿಸುವುದೇನೆಂದರೆ ಸರ್ವೋಚ್ಚ ನ್ಯಾಯಾಲಯವು ಸ್ವಯಂಪ್ರೇರಿತ ರಿಟ್ ಅರ್ಜಿಸಂಖ್ಯೆ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿನಾಯಿಗಳು ವಾಸವಿದ್ದಲ್ಲಿಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕಮಾಡಿ ಮುಖ್ಯಾಧಿಕಾರಿಗಳಿಗೆ ತಿಳಿಸುವುದು.

ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸುವುದು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನುನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು.

ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮ ವಹಿಸಲಾಗುವುದು. ಎಂದು ಪಟ್ಟಣ ಪಂಚಾಯತ ಶಿರಹಟ್ಟಿ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande