ನಟ ಉಮೇಶ ನಿಧನಕ್ಕೆ ಅಶೋಕ್ ಸಂತಾಪ
ಬೆಂಗಳೂರು, 30 ನವೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರ ನಿಧನಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಂತಾಪ ಸೂಚಿಸಿದ್ದಾರೆ. ಸರಿಸುಮಾರು 6 ದಶಕಗಳ ಕಾಲ ಕನ್ನಡ ಸಿನಿ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿದ ಉಮೇಶ್ ಅವರು ಸ್ಯಾಂಡಲ್ ವುಡ್ ನ ಬಹುತೇಕ ಎಲ್ಲಾ ದಿಗ್ಗಜ
ನಟ ಉಮೇಶ ನಿಧನಕ್ಕೆ ಅಶೋಕ್ ಸಂತಾಪ


ಬೆಂಗಳೂರು, 30 ನವೆಂಬರ್ (ಹಿ.ಸ.) :

ಆ್ಯಂಕರ್ : ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರ ನಿಧನಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಂತಾಪ ಸೂಚಿಸಿದ್ದಾರೆ.

ಸರಿಸುಮಾರು 6 ದಶಕಗಳ ಕಾಲ ಕನ್ನಡ ಸಿನಿ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿದ ಉಮೇಶ್ ಅವರು ಸ್ಯಾಂಡಲ್ ವುಡ್ ನ ಬಹುತೇಕ ಎಲ್ಲಾ ದಿಗ್ಗಜ ನಟರೊಂದಿಗೂ ಬೆಳ್ಳಿ ಪರದೆಯನ್ನು ಹಂಚಿಕೊಂಡು 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.

ತಮ್ಮ ಹಾಸ್ಯಭರಿತ ನಟನೆ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದ ಉಮೇಶ್ ಅವರು ಅಗಲಿದರು ಅವರ ಚಲನಚಿತ್ರಗಳ ಮೂಲಕ ಕನ್ನಡಿಗರ ಜನಮಾನಸದಲ್ಲಿ ಅವರು ಸದಾ ಜೀವಂತ. ಶೋಕತಪ್ತ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande