ಭಾಲ್ಕಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಬೀದರ್, 30 ನವೆಂಬರ್ (ಹಿ.ಸ.) : ಆ್ಯಂಕರ್ : ಬೀದರ್ ಜಿಲ್ಲೆಯ ಭಾಲ್ಕಿ ನಗರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಚಿವ ಈಶ್ವರ ಖಂಡ್ರೆ ಸಭೆ ನಡೆಸಿ, ಮುಂಬರುವ ಜಿಪಂ, ತಾಪಂ, ಗ್ರಾಮ ಪಂಚಾಯತ್ ಮತ್ತು ನಗರಸಭೆ ಚುನಾವಣೆಗೆ ಪಕ್ಷದ ಸಂಘಟನೆ ಬಲಪಡಿಸುವ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ
Meeting


ಬೀದರ್, 30 ನವೆಂಬರ್ (ಹಿ.ಸ.) :

ಆ್ಯಂಕರ್ : ಬೀದರ್ ಜಿಲ್ಲೆಯ ಭಾಲ್ಕಿ ನಗರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಚಿವ ಈಶ್ವರ ಖಂಡ್ರೆ ಸಭೆ ನಡೆಸಿ, ಮುಂಬರುವ ಜಿಪಂ, ತಾಪಂ, ಗ್ರಾಮ ಪಂಚಾಯತ್ ಮತ್ತು ನಗರಸಭೆ ಚುನಾವಣೆಗೆ ಪಕ್ಷದ ಸಂಘಟನೆ ಬಲಪಡಿಸುವ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷದ ಏಕತೆ, ತಳಮಟ್ಟದ ಶ್ರದ್ಧಾಪೂರ್ವಕ ಕೆಲಸ ಮತ್ತು ಜನಸೇವೆಯ ಮೂಲಕ ಕಾಂಗ್ರೆಸ್ ಪಕ್ಷ ಭಾಲ್ಕಿಯಲ್ಲಿ ಉತ್ತಮ ಫಲಿತಾಂಶ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ನಗರದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande