ಗದ್ದುಗೆ ಗುದ್ದಾಟದಲ್ಲಿ ರೈತರನ್ನು ಮರೆತ ಸರ್ಕಾರ : ಜೋಶಿ
ಹುಬ್ಬಳ್ಳಿ, 30 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಒಳ ಬಡಿದಾಟದಲ್ಲೇ ಹೆಚ್ಚಿದೆ. ಹಾಗಾಗಿ ರೈತರ ಬಗ್ಗೆ, ಯೋಜನಗಳ ಅನುಷ್ಠಾನ ಬಗ್ಗೆ ಗಮನ ಹರಿಸಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರ
ಗದ್ದುಗೆ ಗುದ್ದಾಟದಲ್ಲಿ ರೈತರನ್ನು ಮರೆತ ಸರ್ಕಾರ : ಜೋಶಿ


ಹುಬ್ಬಳ್ಳಿ, 30 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಒಳ ಬಡಿದಾಟದಲ್ಲೇ ಹೆಚ್ಚಿದೆ. ಹಾಗಾಗಿ ರೈತರ ಬಗ್ಗೆ, ಯೋಜನಗಳ ಅನುಷ್ಠಾನ ಬಗ್ಗೆ ಗಮನ ಹರಿಸಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ವಿಚಾರವಾಗಿ ಕೇಂದ್ರ ಸರ್ಕಾರ ಎಲ್ಲ ತರಹದ ಬೆಂಬಲ ನೀಡಿದೆ. ಅದನ್ನು ಅನುಷ್ಠಾನಕ್ಕೆ ತರಬೇಕಾದ್ದು ರಾಜ್ಯ ಸರ್ಕಾರದ ಕೆಲಸ ಎಂದರು.

ಎಥೆನಾಲ್ ಉತ್ಪಾದನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಉತ್ತಮ ಬೆಲೆಯನ್ನೂ ಕೊಡುತ್ತಿದೆ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಿದೆ. ಮೆಕ್ಕೆಜೋಳಕ್ಕೂ ಬೆಂಬಲ ಬೆಲೆಯಿದೆ. ಹೀಗಿರುವಾಗ ಎಥೆನಾಲ್ ಉತ್ಪಾದನೆಗೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಡಿಸ್ಟಿಲರಿಗಳು ಅಬಕಾರಿ ಅಡಿಯಲ್ಲಿ ಬರುತ್ತವೆಯಾದ್ದರಿಂದ ಮಾನಿಟರ್ ಮಾಡಬೇಕು ಎಂದು ಜೋಶಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande