ಗ್ಯಾರಂಟಿ ಯೋಜನೆಗಳ ಜಾರಿ, ರಾಜ್ಯ ಸರ್ಕಾರ ದೇಶಕ್ಕೇ ಮಾದರಿ : ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ, 30 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸುಮಾರು 70 ವರ್ಷಗಳಿಂದ ಪ್ರತಿ ಸರ್ಕಾರದ ಅವಧಿಯಲ್ಲಿ ಭೂಮಿ ಮಂಜೂರು, ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ರಾಜ್ಯ ಸರ್ಕಾರದ ಅವಧಿಯಲ್ಲಿ ಪಂಚ ಗ್ಯಾರಂಟಿ
ಗ್ಯಾರಂಟಿ ಯೋಜನೆಗಳ ಜಾರಿ, ರಾಜ್ಯ ಸರ್ಕಾರ ದೇಶಕ್ಕೇ ಮಾದರಿ : ಸಚಿವ ಸತೀಶ್ ಜಾರಕಿಹೊಳಿ


ಬೆಳಗಾವಿ, 30 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸುಮಾರು 70 ವರ್ಷಗಳಿಂದ ಪ್ರತಿ ಸರ್ಕಾರದ ಅವಧಿಯಲ್ಲಿ ಭೂಮಿ ಮಂಜೂರು, ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ರಾಜ್ಯ ಸರ್ಕಾರದ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದು ಲೋಕೋಪಯೋಗಿ ಸತೀಶ ಜಾರಕಿಹೊಳಿ ಅವರು ತಿಳಿಸಿದರು.

ಬೆಳಗಾವಿ ನಗರದ ಕುಮಾರ ಗಂದರ್ವ ರಂಗಂಮದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಇವರ ಸಹಯೋಹದಲ್ಲಿ ರವಿವಾರ ಜರುಗಿದ ಪಂಚ ಗ್ಯಾರಂಟಿ ಅನುಷ್ಠಾನದ ಕುರಿತು ಜಿಲ್ಲಾ‌ ಗ್ಯಾರಂಟಿ‌ ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜ‌ನೆ ಜಾರಿಗೂ‌ ಮುನ್ನ ಅನೇಕ ಟೀಕೆಗಳು ಎದುರಾದರೂ ಸಹ ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸುವುದರ ಜೊತೆಗೆ ಸಮಾಜದ‌ ಮುಖ್ಯವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರತಿವರ್ಷ ಬಡವರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಿದೆ. ರಾಜ್ಯ ಸರಕಾರದ‌ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಗಳು ರಾಜ್ಯದ ಪ್ರತಿಯೊಬ್ಬ ಫಲಾನುಭವಿಗೂ ಸಮರ್ಪಕವಾಗಿ ತಲುಪಿಸುವ ಕಾರ್ಯವಾಗಬೇಕು ಎಂದರು.

ಬರುವ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ತಾಂತ್ರಿಕ ಲೋಪದೋಷಗಳನ್ನು ಸರಿಪಡಿಸಲಾಗುವುದು. ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ನೀರಾವರಿ, ರಸ್ತೆ , ಶೈಕ್ಷಣಿಕ ಸೇರಿದಂತೆ ಇನ್ನೂ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿತ್ತಿದೆ.

ಪ್ರತಿಯೊಬ್ಬರಿಗೆ ಅಂದಾಜು ಐದು ಸಾವಿರ ರೂಪಾಯಿವರೆಗೆ ನೀಡಲಾಗುತ್ತಿದೆ. ಈ ಹಣವನ್ನು ಪ್ರತಿಯೊಬ್ಬರೂ ಉತ್ತಮ ಕಾರ್ಯಗಳಿಗೆ ಸದುಪಯೋಗ ಪಡೆದುಕೊಳ್ಳಬೇಕು. ಐದು ವರ್ಷಗಳಿಗೆ ಮೂರು ಲಕ್ಷ‌ ಕೋಟಿ‌ ರೂ. ಗಳನ್ನು‌ ಮೀಸಲಿಡಲಾಗುವುದು. ರಾಜ್ಯ ಸರಕಾರ ಜಾರಿಗೊಳಿಸಿರುವ ಜನಪರ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಇತರರಿಗೂ ತಿಳಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande